2026-05-08 06:19:21

west bengal; suvendu adhikari elected as new cm | ಪಶ್ಚಿಮ ಬಂಗಾಳ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ, ನಾಳೆ ಪ್ರಮಾಣವಚನ | Speed News Kannada

west bengal; suvendu adhikari elected as new cm | ಪಶ್ಚಿಮ ಬಂಗಾಳ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ, ನಾಳೆ ಪ್ರಮಾಣವಚನ | Speed News Kannada

ಕೋಲ್ಕತ್ತಾ:ನಿರೀಕ್ಷೆಯಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆಯಾಗಿದ್ದಾರೆ. ಇವರ ಹೆಸರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರಕಟಿಸಿದ್ದಾರೆ. ಅವರು ನಾಳೆ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಇವರೊಬ್ಬರ ಹೆಸರು ಮಾತ್ರ ಪ್ರಸ್ತಾಪವಾಯಿತು ಎಂದು ಶಾ ತಿಳಿಸಿದ್ದಾರೆ. ಸುವೇಂದು ರಾಜ್ಯದ ಪ್ರಪ್ರಥಮ ಬಿಜೆಪಿ ಮುಖ್ಯಮಂತ್ರಿಯಾಗಲಿದ್ದಾರೆ.

ಬಿಜೆಪಿ 207, ಟಿಎಂಸಿ 80, ಕಾಂಗ್ರೆಸ್ 2 ಮತ್ತು ಇತರ ಪಕ್ಷಗಳು ನಾಲ್ಕು ಸ್ಥಾನ ಗಳಿಸಿವೆ.

ಈ ರಾಜ್ಯದ ಚುನಾವನೆಯನ್ನು ಕೇವಲ ಭಾರತ ಮಾತ್ರವಲ್ಲದೆ ಅನೇಕ ದೇಶಗಳೂ ಸೂಕ್ಷ್ಮವಾಗಿ ಗಮನಿಸುತ್ತಿದ್ದವು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆದಿತ್ತು.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಹೆಸರಿನಲ್ಲಿ 80 ಲಕ್ಷಕ್ಕೂ ಹೆಚ್ಚು ಮತದಾರರನ್ನು ಕೈಬಿಡಲಾಗಿದೆ ಎಂಬ ಆಪಾದನೆ ಪ್ರಮುಖ ಸದ್ದು ಮಾಡಿತ್ತು.

ಮಮತಾ ಬ್ಯಾನರ್ಜಿ ಅವರನ್ನು ಸ್ವತಃ ಸುವೇಂದು ಅಧಿಕಾರಿ ಅವರೇ ಸೋಲಿಸಿದ್ದು ಮತ್ತೊಂದು ದಾಖಲೆಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್‌ ಶಾ ಅವರು ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.