2026-06-08 01:31:17

Whoever is chosen as Khameneis successor will be assassinated | ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಹತ್ಯೆ ಖಚಿತ ಇಸ್ರೇಲ್‌ | Speed News Kannada

Whoever is chosen as Khameneis successor will be assassinated | ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಹತ್ಯೆ ಖಚಿತ ಇಸ್ರೇಲ್‌ | Speed News Kannada

ದುಬೈ: ಇತ್ತೀಚೆಗೆ ಹತ್ಯೆಗೀಡಾದ ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುವುದು ಖಚಿತ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಇಂದು ಹೇಳಿದ್ದಾರೆ.
ಕಳೆದ ಶನಿವಾರ ಇಸ್ರೇಲ್‌–ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿಇರಾನ್‌  ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅಸುನೀಗಿದ್ದರು. ಉತ್ತರಾಧಿಕಾರಿಯಾಗಿ ಅವರ ಮಗ ಮೊಜತಬಾ ಖಮೇನಿ ಆಯ್ಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಇದರ ಬೆನ್ನಲ್ಲೇ ಇಸ್ರೇಲ್‌ ಈ ಬೆದರಿಕೆ ಹಾಕಿದೆ.
ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಇಸ್ರೇಲ್‌ ಅನ್ನು ನಾಶಪಡಿಸುವ, ಅಮೆರಿಕ ಮತ್ತು ಇತರ ದೇಶಗಳಿಗೆ ಬೆದರಿಕೆ ಒಡ್ಡುವ, ತಮ್ಮದೇ ಜನರನ್ನು ಹತ್ತಿಕ್ಕುವ ಕಾರ್ಯವನ್ನು ಮುಂದುವರಿಸುವ ಇರಾನ್‌ ಭಯೋತ್ಪಾದಕ ಆಡಳಿತವು ಯಾರನ್ನೇ ನಾಯಕನನ್ನಾಗಿ ನೇಮಿಸಿದರೂ ಅವರನ್ನು ಹತ್ಯೆ ಮಾಡದೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಹೊಂದಿರುವ ಇರಾನ್‌ನ 'ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್'ಗೆ ಸಂಬಂಧಿಸಿದ ಕಟ್ಟಡವೊಂದನ್ನು ಇಸ್ರೇಲ್ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ವರದಿಯಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.