ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾರ್ಥಕ 4 ದಶಕಗಳನ್ನು ಪೂರೈಸಿರುವ ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹ್ಯಾಟ್ರಿಕ್ ಹೀರೋಗೆ ಅಭನಂದಿನೆ ತಿಳಿಸಿರುವ ಅವರು, ಬಿಡುವಿನ ವೇಳೆ ಶಿವರಾಜ್ ಕುಮಾರ್ ಅವರ ಹಲವು ಸಿನಿಮಾಗಳನ್ನು ನಾನು ನೋಡಿ ಆನಂದಿಸಿದ್ದೇನೆ.
ರಥಸಪ್ತಮಿ, ಜನುಮದ ಜೋಡಿ, ಜೋಡಿಹಕ್ಕಿ, ಟಗರು ಹೀಗೆ ಸಾಲು ಸಾಲು ಹಿಟ್ ಸಿನೆಮಾಗಳ ಮೂಲಕ ಕನ್ನಡ ಚಿತ್ರರಂಗದ ಕೀರ್ತಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಶಿವರಾಜ್ ಕುಮಾರ್ ಅವರ ಅಭಿನಯಕ್ಕೆ ಅವರೇ ಸಾಟಿ ಎಂದು ಬಣ್ಣಿಸಿದ್ದಾರೆ.