2026-04-24 01:41:10

Wife murder his husband | ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ| Speed news kannada

Wife murder his husband | ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ| Speed news kannada

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ. ಕುರ್ಣೇಗಾಲದ ಜವರಪ್ಪ ಕೊಲೆಯಾದ ಪತಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ (26) ಬಂಧಿತ ಆರೋಪಿಗಳು.

ಅನುಮಾನಸ್ಪದ ರೀತಿಯಲ್ಲಿ ಜವರಪ್ಪ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಆಗುತ್ತೆ ಅಂತ ಕೊಲೆಗೆ ಪ್ಲ್ಯಾನ್‌ ಮಾಡಿದ್ದರು. ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಗಲಾಟೆ ಆಗುತ್ತಿತ್ತು. 12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತ ತವರಿಗೆ ಹೋಗಿದ್ದಳು. ಏ.16 ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಜವರಪ್ಪ ಹೋಗಿದ್ದ. ಅಲ್ಲಿಯೆ ಈ ಕೊಲೆ ನಡೆದಿದೆ. ಕೊಲೆ ಮಾಡಿ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಬಿಸಾಕಿದ್ದರು.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.