2026-06-25 02:20:08

Wife stabs husband to death with knife|ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ|Speed News Kannada

Wife stabs husband to death with knife|ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ|Speed News Kannada

ಚಾಕುವಿನಿಂದ ಇರಿದು ಹೆಂಡತಿಯೇ ಗಂಡನ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಲ್ಲತ್ತಹಳ್ಳಿಯಲ್ಲಿ ನಡೆದಿದೆ. ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಹೆಂಡತಿ, ಅತ್ತೆ, ಮಾವನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.