2026-06-08 05:40:56

will form regional party and become cm; who says? Speed News Kannada

will form regional party and become cm; who says? Speed News Kannada

ಬೆಂಗಳೂರು: ಕರ್ನಾಟಕದಲ್ಲಿ ಪ್ರದೇಶಿಕ ಪಕ್ಷಗಳಿಗೆ ಮಹತ್ವ ಭವಿಷ್ಯ ಇಲ್ಲವಾದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಾದೇಶಿಕ ಪಕ್ಷ ಕಟ್ಟುವುದಾಗಿ ಹೇಳಿದ್ದಾರೆ.  ವಿಜಯಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಬಂದಿಲ್ಲ. ಮಗನ ಮದುವೆಯ ಆಹ್ವಾನ ಪತ್ರಿಕೆ ನೀಡಲು ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಯಾರ ಕಾಲಿಗೂ ಬಿದ್ದು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ದುಂಬಾಲು ಬೀಳಲು ಬಂದಿಲ್ಲ. ರಾಜ್ಯದಲ್ಲಿ ನಾನೇ ಪ್ರಾದೇಶಿಕ ಪಕ್ಷ ಕಟ್ಟುತ್ತೇನೆ. 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ ಅವರಂತಹ ಕಡು ಭ್ರಷ್ಟ ಕುಟುಂಬ ಇರುವವರೆಗೂ ನಾನು ಬಿಜೆಪಿ ಸೇರಲು ಬಯಸುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.  ಬಿಜೆಪಿ ಕರೆಯುವ ನಿರೀಕ್ಷೆಯಲ್ಲಿರಲು ನಾನು ಹುಚ್ಚನಲ್ಲ. ಪಶ್ಚಿಮ ಬಂಗಾಳ, ಬಿಹಾರ ಅಥವಾ ಉತ್ತರ ಪ್ರದೇಶ ಚುನಾವಣೆಗಳ ನಂತರ ಕರೆದರೂ ನನ್ನ ನಿರ್ಧಾರ ಬದಲಿಸುವುದಿಲ್ಲ ಎಂದಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.