ಇಸ್ಲಾಮಾಬಾದ್: ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಡೀ ದೇಶ ಭಾರತ ಸಂಭರಾಚರಣೆಯಲ್ಲಿ ತೊಡಗಿಸಿಕೊಂಡಿದ್ದರೆ ಅತ್ತ ಪಾಕಿಸ್ತಾನ ಮಿಲಿಟರಿ ಶಕ್ತಿಯನ್ನು ಇನ್ನಷ್ಟು ಬಲಪಡಿಸುವುದಾಗಿ ತಿಳಸಿದೆ.
ಪಾಕ್ ಸೇನೆಯು ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಮತ್ತು ಯಾವುದೇ ಆಕ್ರಮಣಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ತಂತ್ರಜ್ಞಾನ ಹಾಗೂ ತನ್ನ ಮಿಲಿಟರಿ ಶಕ್ತಿಯನ್ನು ಇನ್ನಷ್ಟು ಬಲಪಡಿಸುವುದಾಗಿ ಪ್ರತಿಪಾದಿಸಿದೆ. ಪಾಕಿಸ್ತಾನ ಶಾಂತಿಪ್ರಿಯ ದೇಶ. ತಾಯ್ನಾಡಿನ ಮೇಲಾಗುವ ಯಾವುದೇ ಆಕ್ರಮಣಕ್ಕೆ ನಿರ್ಣಾಯಕವಾಗಿ ಪ್ರತಿಕ್ರಿಯಿಸಲು ಸಿದ್ಧರಾಗಿದ್ದೇವೆ. ತನ್ಮ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಲು ಸೇನೆ ಸಮರ್ಪಿತವಾಗಿವೆ ಎಂದೂ ಸೇನೆ ಹೇಳಿಕೊಂಡಿದೆ.
ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಮತ್ತು ಪ್ರಾದೇಶಿಕ ಭದ್ರತಾ ಪರಿಸರದ ಜತೆಗೆ ವಿರೋಧಿ ಪಡೆಗಳ ಆಕ್ರಮಣಕಾರಿ ಸಾಮರ್ಥ್ಯವನ್ನು ಸಶಸ್ತ್ರ ಪಡೆಗಳು ಸಂಪೂರ್ಣವಾಗಿ ಅರಿತುಕೊಂಡಿವೆ. ದೇಶವನ್ನು ರಕ್ಷಿಸುವ ಪಾಕಿಸ್ತಾನದ ಸಶಸ್ತ್ರ ಪಡೆಗಳ ಸಂಕಲ್ಪ ಮತ್ತು ಬದ್ಧತೆ ಅಚಲವಾಗಿದೆ ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.
ಭವಿಷ್ಯದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಎದುರಿಸಲು ವೃತ್ತಿಪರತೆ ಮತ್ತು ಆಧುನಿಕ ತಂತ್ರಜ್ಞಾನ ಅಳವಡಿಕೆಗೆ ಹೆಚ್ಚಿನ ಪ್ರಾಶಸ್ಯ್ತ ನೀಡಲಾಗುತ್ತದೆ. ನಾವು ಈಗ ಹೆಚ್ಚು ಜಾಗರೂಕರಾಗಿದ್ದೇವೆ. ಮುಂದಿನ ದಿನಗಳಲ್ಲಿ ಎದುರಾಗುವ ಯಾವುದೇ ಯುದ್ಧ ಅಥವಾ ದಾಳಿಗೆ ತಕ್ಕ ಉತ್ತರ ನೀಡಲು ಸಿದ್ಧರಿದ್ದೇವೆ ಎಂದು ಪಾಕ್ ಸೇನೆ ತಿಳಿಸಿದೆ.