2026-06-08 04:29:33

ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ವಾಪಸ್‌ ಗೆ ಬಿಜೆಪಿ ಆಕ್ರೋಶ| Speed News Kannada

ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ವಾಪಸ್‌ ಗೆ ಬಿಜೆಪಿ ಆಕ್ರೋಶ| Speed News Kannada

ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯುವ ಸಚಿವ ಸಂಪುಟ ನಿರ್ಧಾರಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ,

2022ರ ಮಹಾಶಿವರಾತ್ರಿ ಆಚರಣೆಯಂದು ಕಲಬುರಗಿಯ ಆಳಂದದ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸುವ ಸಂಬಂಧ ಭಾರಿ ಕೋಮು ಗಲಭೆ ನಡೆದಿತ್ತು. ಕಲ್ಲು ತೂರಾಟ ನಡೆದು, ಪೊಲೀಸರ ಮೇಲೆ ಹಲ್ಲೆ ನಡೆದಿತ್ತು. ಜತೆಗೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಅಪಾರ ನಷ್ಟ ಉಂಟಾಗಿತ್ತು. ಈ ಸಂಬಂಧ ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿತ್ತು. ನಿನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ.

ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಲಿಖಿತ ಶಿಫಾರಸಿನ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಸರ್ಕಾರದ ಈ ಕ್ರಮಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಸರ್ಕಾರದ ನಿರ್ಣಯದ ಕುರಿತು ಬಿಜೆಪಿ ಮುಖಂಡ ಸಿ.ಟಿ. ರವಿ ಮಾತನಾಡಿದ್ದು, ರಾಜ್ಯ ಸರ್ಕಾರ ಒಂದು ಕಡೆ ಹಿಂದೂ ಕಾರ್ಯಕರ್ತರನ್ನು ಗುರಿ ಮಾಡಿ ಸುಳ್ಳು ಮೊಕದ್ದಮೆ ದಾಖಲಿಸುತ್ತಿದೆ. ಮತ್ತೊಂದು ಕಡೆ ಮುಸ್ಲಿಮರ ಮೇಲಿನ ಕ್ರಿಮಿನಲ್​​ ಕೇಸ್ ಗಳನ್ನು ಹಿಂಪಡೆಯುತ್ತಿದೆ ಎಂದು ಟೀಕಿಸಿದ್ದಾರೆ.

​ಬೆಂಕಿ ಹಚ್ಚಿದ ಪ್ರಕರಣ, ಆಸ್ತಿ-ಪಾಸ್ತಿ ನಷ್ಟ ಮಾಡಿದ ಪ್ರಕರಣದಂತಹ ಗಂಭೀರ ಪ್ರಕರಣಗಳನ್ನು ವಾಪಸ್ ಪಡೆಯುವುದು ಒಳ್ಳೆಯ ಲಕ್ಷಣ ಅಲ್ಲ. ನಾವು ಕ್ರಿಮಿನಲ್ ಪರ ಎಂಬ ಕೆಟ್ಟ ಸಂದೇಶ ಕೂಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿದ್ದಾರೆ.

ಈ ಪ್ರಕರಣಗಳೂ ಸೇರಿ ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿದ್ದ 52 ಕ್ರಿಮಿನಲ್ ಪ್ರಕರಣಳನ್ನೂ ಹಿಂಪಡೆಯಲಾಗಿದೆ. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧದ 10 ಪ್ರಕರಣಗಳು, ಕಾವೇರಿ ನದಿ ನೀರು ಹೋರಾಟಗಾರರ ವಿರುದ್ಧದ ಪ್ರಕರಣಗಳು, ಕನ್ನಡ ಪರ ಹೋರಾಟ, ಕಳಸಾ-ಬಂಡೂರಿ ಯೋಜನೆ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ರೈತರು ಹಾಗೂ ದಲಿತ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನೂ ಹಿಂಪಡೆಯಲು ಸರ್ಕಾರ ನಿರ್ಧಾರ ಕೈಗೊಂಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.