ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಅಸುರಕ್ಷಿತ ಹಂಪ್ ಕಾರಣದಿಂದ ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವತಿಯರನ್ನು ಪ್ರಿಯಾ (23) ಎಂದು ಗುರುತಿಸಲಾಗಿದ್ದು, ಸ್ವಾತಿ (24) ಎಂಬ ಯುವತಿ ಗಂಭೀರ ಗಾಯಗೊಂಡಿದ್ದಾಳೆ. ಗಾಯಾಳು ಯುವತಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಯುವತಿಯರಿಬ್ಬರೂ ಹೆಳ್ಮೆಟ್ ಧರಿಸದೆ ಬುಲೆಟ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇದರಿಂದ ತಲೆ ಮತ್ತು ಮುಖ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅಪಘಾತವು ಹಂಪ್ ಕಾಣದ ಕಾರಣ ಸಂಭವಿಸಿದೆ ಎನ್ನಲಾಗಿದೆ. ಪ್ರಿಯಾ ಮತ್ತು ಸ್ವಾತಿ ಇಬ್ಬರೂ ಎಂಸಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳು ಯುವತಿಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಹಾಸನ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಈ ಭಾಗದ ರಸ್ತೆ ಸುರಕ್ಷತೆ ಕುರಿತು ತೀವ್ರ ಎಚ್ಚರಿಕೆ ನೀಡಲಾಗಿದೆ. ಸಾರಿಗೆ ಬಸ್ ಬ್ರೇಕ್ ಫೇಲ್ - ತಪ್ಪಿದ ಭಾರೀ ದುರಂತ.!
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿಸಿ (KSRTC) ಬಸ್ ನಲ್ಲಿ ಬ್ರೇಕ್ ವೈಫಲ್ಯ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಪಕ್ಕದ ರೈಲಿಂಗ್ಸ್‌ಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಕೆ.ಆರ್.ಪೇಟೆ ಕಡೆಯಿಂದ ಭೇರ್ಯ ಕಡೆಗೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಬ್ರೇಕ್ ವೈಫಲ್ಯ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಪಕ್ಕದ ರೈಲಿಂಗ್ಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಗಾಜುಗಳು ಒಡೆಯಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 60ಕ್ಕೂ ಹೆಚ್ಚು ಪ್ರಯಾಣಿಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಮತ್ತು ಪ್ರಯಾಣಿಕರು ತಕ್ಷಣವೇ ಬಸ್‌ನಲ್ಲಿ ಸಿಲುಕಿದ ಎಲ್ಲರನ್ನು ಸುರಕ್ಷಿತವಾಗಿ ಹೊರತೆಗೆಯುವಲ್ಲಿ ನೆರವಾಗಿದ್ದಾರೆ. ಚಾಲಕನಿಗೆ ಸಹ ಸಣ್ಣ ಗಾಯಗಳಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ.