2026-05-09 05:41:43

Woman dies after being electrocuted | ಟುಂಕುರ್ ವಿದ್ಯುತ್ ತಗುಲಿ ಮಹಿಳೆ ಸಾ*ವು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ | Speed News Kannada

Woman dies after being electrocuted | ಟುಂಕುರ್ ವಿದ್ಯುತ್ ತಗುಲಿ ಮಹಿಳೆ ಸಾ*ವು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ | Speed News Kannada

ತಿಪಟೂರು: ತೋಟದಲ್ಲಿ ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಅಕ್ರಮವಾಗಿ ಹರಿಸಲಾಗಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆಯೊಬ್ಬರು ದುರ್ಮರಣಕ್ಕೀಡಾಗಿರುವ  ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮಾರಗೊಂಡನಹಳ್ಳಿಯಲ್ಲಿ 58 ವರ್ಷದ ಚನ್ನಮ್ಮ ಮೃತಪಟ್ಟ ದುರ್ದೈವಿ. ಮಾರಗೊಂಡನಹಳ್ಳಿ ಗ್ರಾಮದ ರಂಗಸ್ವಾಮಿ ಹಾಗೂ ದಯಾನಂದ ಎಂಬುವವರಿಗೆ ಸೇರಿದ ತೋಟದಲ್ಲಿ ಈ  ಘಟನೆ ಸಂಭವಿಸಿದೆ. ಮೂರು ದಿನಗಳ ಹಿಂದೆ ಕೆಲಸಕ್ಕೆಂದು ತೆರಳಿದ್ದ ಚನ್ನಮ್ಮ ಮನೆಗೆ ಮರಳಿರಲಿಲ್ಲ. ಇಂದು ತೋಟದಲ್ಲಿ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಗ್ರಾಮದಲ್ಲಿ ವಿದ್ಯುತ್ ಶಾಕ್‌ನಿಂದ ಸಾವು ಸಂಭವಿಸುತ್ತಿರುವುದು ಇದೇ ಮೊದಲೇನಲ್ಲ. ಈಗಾಗಲೇ 5 ಜನರು ಈ ಹಿಂದೆ ಇದೇ ರೀತಿ ಅಕ್ರಮ ವಿದ್ಯುತ್ ತಂತಿಗೆ ಬಲಿಯಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪದೇ ಪದೇ ಇಂತಹ ಅವಘಡಗಳು ಸಂಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.