2026-06-25 02:37:41

Women of Bengaluru Beware | ಬೆಂಗಳೂರಿನ ಮಹಿಳೆಯರೇ ಎಚ್ಚರ ಮತ್ತೆ ನಗರದಲ್ಲಿ ಸರಗಳ್ಳರು ಹಾವಳಿ | Speed News Kannada

Women of Bengaluru Beware | ಬೆಂಗಳೂರಿನ ಮಹಿಳೆಯರೇ ಎಚ್ಚರ ಮತ್ತೆ ನಗರದಲ್ಲಿ ಸರಗಳ್ಳರು ಹಾವಳಿ | Speed News Kannada

ಬೆಂಗಳೂರು, ಫೆ.21: ರಾಜಧಾನಿಯಲ್ಲಿಬಂಗಾರದ ಬೆಲೆ ಗಗನಕ್ಕೇರುತ್ತಿದ್ದಂತೆ, ಇತ್ತ ಸರಗಳ್ಳರ ಹಾವಳಿಯೂ ಮಿತಿಮೀರಿದೆ. ಬೈಕ್‌ನಲ್ಲಿ ಹೆಲೈಟ್ ಧರಿಸಿ ಬರುವ ಖದೀಮರು, ರಸ್ತೆಯಲ್ಲಿ ಒಂಟಿಯಾಗಿ ಹೋಗುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿರುವ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಆಗ್ಲಾಗೆ ಎಚ್ಚರಿಕೆ ನೀಡುತ್ತಿದ್ದಾರೆ. ಇದೀಗ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿಡಿಯೋ ಸ್ಟಾಪ್ ನಿವಾಸಿ ಇಂದ್ರಾವತಿ ಎಂಬುವವರೇ ಈ ಕೃತ್ಯಕ್ಕೆ ಬಲಿಯಾದ ಮಹಿಳೆ. ರಾತ್ರಿ ಸುಮಾರು 8:30ರ ವೇಳೆಗೆ ಇಂದ್ರಾವತಿ ಅವರು ದಿನಸಿ ಅಂಗಡಿಯಿಂದ ಸಾಮಾನು ತರಲು ಒಂಟಿಯಾಗಿ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಹೊಂಚು ಹಾಕಿದ್ದ ಇಬ್ಬರು ಕಿರಾತಕರು ಬೈಕ್‌ನಲ್ಲಿ ಬಂದು, ಮೊದಲು ಇವರನ್ನು ದಾಟಿ ಮುಂದೆ ಹೋಗಿದ್ದಾರೆ. ಬಳಿಕ ಯಾರು ಇಲ್ಲದನ್ನು ಖಚಿತಪಡಿಸಿಕೊಂಡು ವಾಪಸ್ ತಿರುಗಿ ಬಂದು, ಇಂದ್ರಾವತಿ ಅವರ ಕುತ್ತಿಗೆಯಲ್ಲಿದ್ದ 50 ಗ್ರಾಂ ತೂಕದ ಮಾಂಗಲ್ಯ ಸರವನ್ನು ಬಲವಂತವಾಗಿ ಕಿತ್ತು ವೇಗವಾಗಿ ಅಲ್ಲಿಂದ ಪರಾರಿಯಾಗಿದ್ದಾರೆ.
ಈ ಇಡೀ ಘಟನೆಯ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹೆಲ್ಕೆಟ್ ಧರಿಸಿದ್ದರಿಂದ ಆರೋಪಿಗಳ ಗುರುತು ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿದೆ. ಇಂದ್ರಾವತಿ ಅವರು ಗಾಬರಿಯಿಂದ ಕಿರುಚಾಡಿದರೂ, ಆರೋಪಿಗಳು ಕ್ಷಣಾರ್ಧದಲ್ಲಿ ಕಣ್ಮರೆಯಾಗಿದ್ದಾರೆ. ಬೈಕ್‌ನಲ್ಲಿ ಬಂದವರು ಏಕಾಏಕಿ ಸರಕ್ಕೆ ಕೈ ಹಾಕಿದರು. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸರ ಕಿತ್ತುಕೊಂಡು ವೇಗವಾಗಿ ಹೊರಟು ಹೋದರು ಎಂದು ಇಂದ್ರಾವತಿ ಹೇಳಿದ್ದಾರೆ.
ನಗರದಲ್ಲಿ ಸರಗಳ್ಳರು ಮತ್ತೆ ಸಕ್ರಿಯರಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ. ಬಂಗಾರದ ಬೆಲೆ ಏರಿಕೆಯಾಗಿರುವ ಈ ಸಂದರ್ಭದಲ್ಲಿ ಹಳೇ ಖದೀಮರೇ ಮತ್ತೆ ಆಕ್ಟಿವ್ ಆಗಿದ್ದಾರೆಯೇ ಎಂಬ ಅನುಮಾನ ಮೂಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.