2026-05-02 11:58:09

Worker dies due to the heat of the sun | ಯಾದಗಿರಿ ಬಿಸಿಲಿನ ತಾಪಕ್ಕೆ ಕಾರ್ಮಿಕ ಬಲಿ | Speed News Kannada

Worker dies due to the heat of the sun | ಯಾದಗಿರಿ ಬಿಸಿಲಿನ ತಾಪಕ್ಕೆ ಕಾರ್ಮಿಕ ಬಲಿ | Speed News Kannada

ಯಾದಗಿರಿ,ಮೇ.2- ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಸಿದ್ದಪ್ಪ ಕೊಂಡಗುಳಿ ಎಂದು ಗುರುತಿಸಲಾಗಿದೆ. ಮೃತ ಸಿದ್ದಪ್ಪ ಕೂಲಿ ಕೆಲಸ ಮಾಡಿ ಮರಳಿ ಮನೆ ಬಂದಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೂಲಿ ಕೆಲಸಕ್ಕೆ ತೆರಳಿದ್ದಾಗ ಬಿಸಿಲು ಹೆಚ್ಚಾದ್ದರಿಂದ ಮನೆಗೆ ಮರಳಿದ್ದರು. ಮನೆಗೆ ಬಂದ ತಕ್ಷಣ ನೀರಿನ ಕುಡಿದ ಕೆಲ ಕ್ಷಣಗಳಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತ ಸಿದ್ದಪ್ಪ ಕುಟುಂಬಸ್ಥರು ಕಡುಬಡತನದಲ್ಲಿ ಜೀವನ ನಡೆಸುತ್ತಿದ್ದಾರೆ, ಸಿದ್ದಪ್ಪ ಸಾವಿನಿಂದ ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಕೂಲಿ ನಾಲಿ ಮಾಡಿ ಸಿದ್ದಪ್ಪ ಕುಟುಂಬಕ್ಕೆ ನೆರವು ಆಗಿದ್ದ.
ಹೀಗಾಗಿ ಸರ್ಕಾರ ಕೂಡಲೇ ಮೃತ ಕುಟುಂಬಸ್ಥರಿಗೆ ಸಹಾಯ ಮಾಡಬೇಕೆಂದು ಗ್ರಾಮಸ್ಥರು ಹಾಗು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಆಗ್ರಹಿಸಿದ್ದಾರೆ. ಮೂಲಗಳ ಪ್ರಕಾರ ಆತ ಮಾನಸಿಕ ಅಸ್ವಸ್ಥ ನಾಗಿದ್ದು ಬೇರ ಕಾರಣದಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಸಿದ್ದಪ್ಪ ಕೂಲಿ ಕೆಲಸ ಮಾಡಿ ಮರಳಿ ಮನೆ ಬಂದಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೂಲಿ ಕೆಲಸಕ್ಕೆ ತೆರಳಿದ್ದಾಗ ಬಿಸಿಲು ಹೆಚ್ಚಾದ್ದರಿಂದ ಮನೆಗೆ ಮರಳಿದ್ದರು. ಮನೆಗೆ ಬಂದ ತಕ್ಷಣ ನೀರಿನ ಕುಡಿದ ಕೆಲ ಕ್ಷಣಗಳಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.