2026-06-08 04:39:37

You can watch the budget live at bus stops tomorrow | ನಾಳೆ ಬಸ್ ನಿಲ್ದಾಣಗಳಲ್ಲೂ ಬಜೆಟ್‌ ನೇರಪ್ರಸಾರ ನೋಡಬಹುದು | Speed News Kannada

You can watch the budget live at bus stops tomorrow | ನಾಳೆ ಬಸ್ ನಿಲ್ದಾಣಗಳಲ್ಲೂ ಬಜೆಟ್‌ ನೇರಪ್ರಸಾರ ನೋಡಬಹುದು | Speed News Kannada

2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ  ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಾರ್ಚ್ 6 ಶುಕ್ರವಾರ ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ 230 ಬಸ್ ನಿಲ್ದಾಣದ ಟಿವಿಗಳಲ್ಲಿ  ಹಮ್ಮಿಕೊಳ್ಳಲಾಗಿದೆ.
ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.