ನವದೆಹಲಿ: ನೀವು ನಮ್ಮ ಆನ್‌ಲೈನ್ ಪೋಸ್ಟ್‌ಗಳನ್ನು ಅಳಿಸಬಹುದು, ಆದರೆ,ನಮ್ಮನ್ನು ಅಳಿಸಲು ಸಾಧ್ಯವಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಗುಡುಗಿದ್ದಾರೆ. ಶನಿವಾರ ಹೇಳಿದ್ದು, ಈ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇಂದು NEET 2026 ಪೇಪರ್ ಸೋರಿಕೆ ಹಾಗೂ CBSE ಪರೀಕ್ಷಾ ಮಂಡಳಿಯ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಕ್ಷ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನೂರಾರು ಯುವಕ, ಯುವತಿಯರು ಜಿರೆಳೆಯ ಮಾಸ್ಕ್ ಧರಿಸಿ ಗಮನ ಸೆಳೆದರು. ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆಗೆ ಒತ್ತಾಯಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಭಿಜೀತ್ ದೀಪ್ಕೆ, ಸರ್ಕಾರ ನಮ್ಮ ಬೇಡಿಕೆಗಳನ್ನು ಪರಿಗಣಿಸುವ ಬದಲು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಚಟುವಟಿಕೆಗಳನ್ನು ನಿರ್ಬಂಧಿಸಲು ಮುಂದಾಗಿದೆ ಎಂದು ಆರೋಪಿಸಿದರು.
ಪ್ರೀತಿಯ ಸ್ನೇಹಿತರೇ, ಹೋರಾಟ ಆರಂಭವಾಗಿದೆ. ಇದು ದೀರ್ಘ ಹೋರಾಟ. ನಾವು ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಒಂದು ತಿಂಗಳಾಗಿದೆ, ಆದರೆ ಈ ವ್ಯಕ್ತಿ ನಾಚಿಕೆಯಿಲ್ಲದೆ ಅಧಿಕಾರಕ್ಕೆ ಅಂಟಿಕೊಂಡು ಕುಳಿತಿದ್ದಾರೆ. ಕ್ರಮ ತೆಗೆದುಕೊಳ್ಳುವ ಬದಲು ನಮ್ಮ ಖಾತೆಗಳನ್ನು ಹ್ಯಾಕ್ ಮಾಡುವುದು ಮತ್ತು ನಮ್ಮ ಪೋಸ್ಟ್‌ಗಳನ್ನು ಅಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೀವು ನಮ್ಮ ಪೋಸ್ಟ್‌ಗಳನ್ನು ಅಳಿಸಬಹುದು, ಆದರೆ, ನಮ್ಮನ್ನು ಈ ಹೋರಾಟದಿಂದ ಅಳಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.