2026-03-07 06:15:16

Young man commits suicide by jumping in front of Delhi Metro train | ದೆಹಲಿ ಮೆಟ್ರೋ ರೈಲಿನ ಎದುರು ಹಾರಿ ಯುವಕ ಆತ್ಮಹತ್ಯೆ ಕಾರಣವೇನು | Speed News Kannada

Young man commits suicide by jumping in front of Delhi Metro train | ದೆಹಲಿ ಮೆಟ್ರೋ ರೈಲಿನ ಎದುರು ಹಾರಿ ಯುವಕ ಆತ್ಮಹತ್ಯೆ ಕಾರಣವೇನು | Speed News Kannada

ನವದೆಹಲಿ: ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತ ಯುವಕನೊಬ್ಬ ದೆಹಲಿ ಮೆಟ್ರೋ ರೈಲಿನ ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಗ್ಗೆ 11.7ಕ್ಕೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ದುರಂತ ನಡೆದಿದೆ. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲಿಗೆ ಆತ ಬಲಿಯಾಗಿದ್ದಾನೆ.
ಮೃತ ಯುವಕನನ್ನು ನಜಾಫ್‌ಗಢ ನಿವಾಸಿ ಎಂದು ಗುರುತಿಸಲಾಗಿದೆ. ಆತ 12ನೇ ತರಗತಿ ಪೂರ್ಣಗೊಳಿಸಿ, ಉನ್ನತ ಶಿಕ್ಷಣಕ್ಕೆ ಖಾಸಗಿ ಸಂಸ್ಥೆಯಲ್ಲಿ ಕೋಚಿಂಗ್ ತರಗತಿಗೆ ಹಾಜರಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 
ಈ ಘಟನೆಯಿಂದ ನೀಲಿ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಕೆಲ ಸಮಯ ಸ್ಥಗಿತಗೊಂಡಿದ್ದವು.
ಪ್ರಾಥಮಿಕ ತನಿಖೆಯಲ್ಲಿ ಆತ ವೈಯಕ್ತಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಆತನ ತಂದೆ ಡಿಟಿಸಿಯಲ್ಲಿ ಗುತ್ತಿಗೆ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ.  (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮೊದಲು 2025ರ ನವೆಂಬರ್ 24ರಂದು ರೋಹಿಣಿ ವೆಸ್ಟ್ ಮೆಟ್ರೋ ನಿಲ್ದಾಣಕ್ಕೆ ಬರುತ್ತಿದ್ದ ರೈಲಿನ ಮುಂದೆ ಹಾರಿ 37 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.