2026-03-07 05:55:59

Young man found dead sleeping in a field | ಜಮೀನಿನಲ್ಲಿ ಮಲಗಿದ್ದ ಯುವಕ ಶವವಾಗಿ ಪತ್ತೆ ಹ*ತ್ಯೆಯ ಶಂಕೆ | Speed News Kannada

Young man found dead sleeping in a field | ಜಮೀನಿನಲ್ಲಿ ಮಲಗಿದ್ದ ಯುವಕ ಶವವಾಗಿ ಪತ್ತೆ ಹ*ತ್ಯೆಯ ಶಂಕೆ | Speed News Kannada

ಕಲಬುರಗಿ : ಕಲಬುರಗಿಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.. ದೋಟಿಕೊಳ ಗ್ರಾಮದ ಜಮೀನಿನಲ್ಲಿ ಮಲಗಿದ್ದ ಯುವಕ ಶರಣು ಭಾಸಗಿ (25) ಮೃತ ಯುವಕನಾಗಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ.
ಹೊಲದಲ್ಲಿ ಬೆಳೆ ಕಾಯಲು ಜಮೀನಿನಲ್ಲಿಯೇ ಮಲಗಿದ್ದನು. ಆದ್ರೆ ದೋಟಿಕೋಳ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳದ ಪರಿಶೀಲನೆ ನಡೆಸಿದ್ದಾರೆ.
ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಾರೋ ಸ್ನೇಹಿತರೆ ಹತ್ಯೆಗೈದಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಭಾನುವಾರ ಮಧ್ಯರಾತ್ರಿ ಕೊಲೆ ಮಾಡಿದ್ದಾರೆ ಎಂದು ಯುವಕ ಶರಣು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಸದ್ಯ ಕೇಸ್ ದಾಖಲಾತಿ ಮಾಡಿಕೊಂಡಿರೋ ಪೊಲೀಸರಿ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.