ಕಲಬುರಗಿ : ಕಲಬುರಗಿಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.. ದೋಟಿಕೊಳ ಗ್ರಾಮದ ಜಮೀನಿನಲ್ಲಿ ಮಲಗಿದ್ದ ಯುವಕ ಶರಣು ಭಾಸಗಿ (25) ಮೃತ ಯುವಕನಾಗಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ.
ಹೊಲದಲ್ಲಿ ಬೆಳೆ ಕಾಯಲು ಜಮೀನಿನಲ್ಲಿಯೇ ಮಲಗಿದ್ದನು. ಆದ್ರೆ ದೋಟಿಕೋಳ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳದ ಪರಿಶೀಲನೆ ನಡೆಸಿದ್ದಾರೆ.
ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಾರೋ ಸ್ನೇಹಿತರೆ ಹತ್ಯೆಗೈದಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಭಾನುವಾರ ಮಧ್ಯರಾತ್ರಿ ಕೊಲೆ ಮಾಡಿದ್ದಾರೆ ಎಂದು ಯುವಕ ಶರಣು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಸದ್ಯ ಕೇಸ್ ದಾಖಲಾತಿ ಮಾಡಿಕೊಂಡಿರೋ ಪೊಲೀಸರಿ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.